Download Our App

Follow us

Home » ಕಾನೂನು » ಪಿ ಎಸ್ ಐ ಆಕಾಂಕ್ಷಿಗಳಿಗೆ ಶುಭ ಶುಕ್ರವಾರ. PSI ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು

ಪಿ ಎಸ್ ಐ ಆಕಾಂಕ್ಷಿಗಳಿಗೆ ಶುಭ ಶುಕ್ರವಾರ. PSI ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ಮಹತ್ವದ ತೀರ್ಪು ನೀಡಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಸರ್ಕಾರಕ್ಕೆ, ಹೈಕೋರ್ಟ್‌ ಆದೇಶ ನೀಡಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ. ಎಸ್. ದಿನೇಶ್ ಕುಮಾರ್, ಟಿ. ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ಪೀಠ, ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ ನೀಡಿದ್ದು, ಪಿ ಎಸ್ ಐ ಆಕಾಂಕ್ಷಿಗಳ ನೆಮ್ಮದಿಗೆ ಕಾರಣವಾಗಿದೆ. 

2021ರ ಅಕ್ಟೋಬರ್ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಪಿ ಎಸ್ ಐ ಹುದ್ದೆಗೆ ಲಿಖಿತ ಪರೀಕ್ಷೆ ನಡೆದಿತ್ತು. 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಕೆಲವರು ಬ್ಲೂಟುತ್ ಬಳಸಿ ಪರೀಕ್ಷೆಯಲ್ಲಿ ಆಕ್ರಮ ನಡೆಸಿದ್ದರು. ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದರು. ಸರ್ಕಾರ ಆಕ್ರಮ ಮಾಡಿದವರನ್ನು ಹೊರಗಿಟ್ಟು ಮರು ಪರೀಕ್ಷೆ ನಡೆಸುವದು ಸಾಧ್ಯವಿಲ್ಲ ಎಂದು ಹೇಳಿತ್ತು. ಹೈಕೋರ್ಟ ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸೂಚಿಸಿತ್ತು. 

ಇಂದು ವಿಚಾರಣೆ ನಡೆಸಿದ ಹೈಕೋರ್ಟ ವಿಭಾಗೀಯ ಪೀಠದ ನ್ಯಾಯಮೂರ್ತಿಗಳು ಮರು ಪರೀಕ್ಷೆ ನಡೆಸುವಂತೆ ಆದೇಶ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!