ಬಿ ಎಸ್ ಯಡಿಯೂರಪ್ಪನವರ ಪುತ್ರ ಶಾಸಕ ಬಿ ವೈ ವಿಜಯೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷರಾಗುತ್ತಿದ್ದಂತೆ ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಿ ವೈ ವಿಜಯೇಂದ್ರರ ನೇಮಕದ ಕುರಿತು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ನೇಮಕದ ಬಗ್ಗೆ ಪ್ರತಿಕ್ರಿಯೆ ಪಡೆಯಲು ಹೋಗಿದ್ದ ಮಾಧ್ಯಮ ಲೋಗೋ ತಳ್ಳಿ ಬೇರೆ ವಾಹನದಲ್ಲಿ ಹೋದರು.
ಬಿ ವೈ ವಿಜಯೇಂದ್ರ ಹಾಗೂ ಶಾಸಕ ಅರವಿಂದ ಬೆಲ್ಲದ ನಡುವೆ ಕಳೆದ ಎರಡು ವರ್ಷಗಳಿಂದ ಕೋಲ್ಡ್ ವಾರ ನಡೆಯುತ್ತಿದ್ದು, ಅದು ಇದೀಗ ಬಹಿರಂಗಗೊಂಡಂತಾಗಿದೆ. ಬಿಜೆಪಿಯಲ್ಲಿ ಎಲ್ಲವು ಸರಿಯಿಲ್ಲ ಅನ್ನೋದು ಇದೀಗ ಗೊತ್ತಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ ವೈ ವಿಜಯೇಂದ್ರ ಅವರು ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಶಾಸಕ ಬೆಲ್ಲದ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ.
Author: Karnataka Files
Post Views: 217





