ಕಂದಾಯ ಸಚಿವ ಕೃಷ್ಣಬೈರೇಗೌಡ ಇಂದು ರುದ್ರವತಾರ ತಾಳಿದ್ದರು. ಇಂದು ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಕಚೇರಿಗೆ ಸಿಬ್ಬಂದಿಯೆ ಬಂದಿರಲಿಲ್ಲ. ಇದರಿಂದ ಕೆಂಡಾಮಂಡಲರಾದ ಅವರು ತಹಶೀಲ್ದಾರ್ ರೇಣುಕಮ್ಮ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ತಹಸೀಲ್ದಾರ ಕಚೇರಿ ಸಿಬ್ಬಂದಿಯ ಆಡಳಿತ ವೈಖರಿಯನ್ನು ಪ್ರಶ್ನಿಸಿದರು. ಜನಸಾಮಾನ್ಯರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಬೇಜವಾಬ್ದಾರಿಯಿಂದ ನಡೆದುಕೊಂಡರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೃಷ್ಣಬೈರೇಗೌಡರು ಕಂದಾಯ ಸಚಿವರಾದ ಬಳಿಕ ತಹಸೀಲ್ದಾರ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡುತ್ತಿದ್ದು, ಆಡಳಿತಕ್ಕೆ ಚುರುಕು ಮುಟ್ಟಿ ಮುಟ್ಟಿಸುತ್ತಿದ್ದಾರೆ. ತಹಸೀಲ್ದಾರ ಕಚೇರಿಯ ಸಿಬ್ಬಂದಿ ಯಾವ ಸಮಯದಲ್ಲಿ ಕಚೇರಿಯಲ್ಲಿ ಇರ್ತಾರೆ ಅನ್ನೋದನ್ನ ಫಲಕದಲ್ಲಿ ಬರೆಯಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಗೆ ತಹಸೀಲ್ದಾರ ಕಚೇರಿ ಸಿಬ್ಬಂದಿಗಳು ಸಿಗಲ್ಲ ಅನ್ನೋ ಆರೋಪ ಕೇಳಿ ಬರುತ್ತಿದ್ದು, ಇನ್ಮುಂದೆ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವದೆಂದು ಎಚ್ಚರಿಸಿದ್ದಾರೆ.





