ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುವ ಮುನ್ನವೇ, ಕಾಂತರಾಜು ವರದಿ ಬಗ್ಗೆ ಪರ ವಿರೋದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಒಂದು ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಇದೆಲ್ಲದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಲ್ಲಿಸುವ ಮುನ್ನವೇ ವರದಿ ಜಾರಿಯಾಗಬೇಕೇ ಅಥವಾ ಬೇಡವೇ? ಎಂಬ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಸ್ವೀಕರಿಸಬೇಡಿ ಎನ್ನುವವರಿಗೂ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವರದಿ ಸಲ್ಲಿಕೆಯಾದ ನಂತರ ನೋಡೋಣ, ಈಗಲೇ ಸುಮ್ಮನೆ ಊಹೆಗಳ ಮೇಲೆ ಮಾತನಾಡುವದು ಅರ್ಥಹೀನ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

Author: Karnataka Files
Post Views: 177





