ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿರುವ ಕಿರೆಸೂರ್ ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ಸವಾರ ಬ್ರಿಜ್ ಡಿವೈಡರಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ ಸವಾರ ಹೆಬಸೂರು ಗ್ರಾಮದ ಉಮೇಶ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ. 9 ತಿಂಗಳ ಹಿಂದೆ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಉಮೇಶ ಹುಬ್ಬಳ್ಳಿಗೆ ಹೊಂಟಿದ್ದ ಎನ್ನಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.
Author: Karnataka Files
Post Views: 3





