ಮೂರು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದ ಸುಚಿತ್ರ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ಸುಚಿತ್ರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ. ಗ್ರಾಮ ಸೇವಕನಾಗಿದ್ದ ಗಂಡ ಮೃತಪಟ್ಟ ಬಳಿಕ ಸುಚಿತ್ರಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಕೊಡಲಾಗಿತ್ತು. ಸುಚಿತ್ರಳಿಗೆ ಒಂದು ಹೆಣ್ಣು ಮಗುವಿದ್ದು, ಮಗು ಶಾಲೆಯಿಂದ ಮನೆಗೆ ಬಂದಾಗ ಈ ಆತ್ಮಹತ್ಯೆ ಮಾಡಿಕೊಂಡ ವಿಷಯ ಗೊತ್ತಾಗಿದೆ. ರಕ್ಷಣಾಪುರಂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರಿಗೆ ತನಿಖೆ ಆರಂಭಿಸಿದ್ದಾರೆ.
Author: Karnataka Files
Post Views: 2





