ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ, ಮತ್ತು ಅಭಿವೃದ್ಧಿಗೆ ವೇಗ ಕೊಡುವ ನಿಟ್ಟಿನಲ್ಲಿ ನಿರ್ಮಿಸಲಾದ ಸುವರ್ಣಸೌಧದಲ್ಲಿ ನಡೆದ ಅಧಿವೇಶನ ಗಮನ ಸೆಳೆದಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಸಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಿದೆ.
ಉತ್ತರ ಕರ್ನಾಟಕದ ಚರ್ಚೆಯಲ್ಲಿ 42 ಜನ ಶಾಸಕರು ಭಾಗವಹಿಸಿದ್ದಾರೆ. 42 ಶಾಸಕರು ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ 11 ಗಂಟೆ 4 ನಿಮಿಷ ಮಾತನಾಡಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ, ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಬಗ್ಗೆ ಚರ್ಚೆಯಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಾಗಿದೆ.
ಕಾಂಗ್ರೆಸ್ ನ 24, ಬಿಜೆಪಿಯ 15, ಜನತಾ ದಳ ಮತ್ತು ಪಕ್ಷೇತರರು ಸೇರಿ ಇಬ್ಬರು ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಲಹೆಗಳನ್ನು ನೀಡಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ ಬಿಜೆಪಿ ಮೂರು ವರ್ಷ ಆಡಳಿತ ನಡೆಸಿದಾಗ ಉತ್ತರ ಕರ್ನಾಟಕದ ಬಗ್ಗೆ ಒಮ್ಮೆ ಮಾತ್ರ ಚರ್ಚೆಯಾಗಿತ್ತು. ಅದಾದ ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿತ್ತು.





