ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡರೊಂದಿಗೆ ಪ್ರಧಾನಿ ಭೇಟಿ ಮಾಡಿದ ಸಿದ್ದರಾಮಯ್ಯ, ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದರು. ಭೀಕರ ಬರ ಎದುರಿಸಲು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದರು.
Author: Karnataka Files
Post Views: 5





