ಹುಬ್ಬಳ್ಳಿಯಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದಿನ ಅಯೋಧ್ಯೆ ಕರಸೇವಕರ ಬಂಧನ ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್, ಅಶೋಕ ಭಾಗವಹಿಸಲಿದ್ದಾರೆ. ಸರ್ಕಾರ ಹಿಂದು ಕಾರ್ಯಕರ್ತರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದು, ದೇಶ ರಾಮ ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿದ್ದಾಗ, ಕಾಂಗ್ರೇಸ್ಸಿಗೆ ಅದನ್ನು ನೋಡಲು ಆಗುತ್ತಿಲ್ಲ ಎಂದು ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author: Karnataka Files
Post Views: 2





