ಶಿವಮೊಗ್ಗದಲ್ಲಿ ನಾಳೆ ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆ ಜಾರಿಗೆ ಬರಲಿದೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ” ಯುವನಿಧಿ ” ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಸಿಗಲಿದ್ದು, ಲಕ್ಷಕ್ಕೂ ಹೆಚ್ಚು ಪದವೀಧರರು ಭಾಗವಹಿಸುವ ನಿರೀಕ್ಷೆ ಇದೆ.
ಪದವೀಧರರಿಗೆ ಮಾಸಿಕ 3 ಸಾವಿರ ಮತ್ತು ಡಿಪ್ಲೋಮ ಪದವಿ ಹೊಂದಿದವರಿಗೆ ಮಾಸಿಕ 1500 ಕೊಡುವ ಯೋಜನೆ ಇದಾಗಿದ್ದು, ರಾಜ್ಯದ ಸುಮಾರು ನಾಲ್ಕು ಲಕ್ಷ ನಿರುದ್ಯೋಗಿ ಪದವೀಧರರಿಗೆ ಲಾಭ ಸಿಗಲಿದೆ ಎಂದು ಸರ್ಕಾರ ಹೇಳಿದೆ. ನಾಳೆ ಬೆಳಿಗ್ಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ಸಿಗಲಿದೆ.
Author: Karnataka Files
Post Views: 2





