ಗಡಿನಾಡು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಅಖಾಡಾ ಕುತೂಹಲ ಮೂಡಿಸಿದೆ. ಕಾಂಗ್ರೇಸ್ಸಿನಿಂದ ಯುವ ಮುಖಗಳು ಚುನಾವಣಾ ಅಖಾಡಕ್ಕೆ ಇಳಿಯುವದು ಬಹುತೇಕ ಖಚಿತವಾಗಿದೆ.
ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃನಾಲ್ ಹೆಬ್ಬಾಳಕರ, ಚಿಕ್ಕೋಡಿಯಿಂದ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಮಾಡಲಿದ್ದಾರೆ. ಈ ಇಬ್ಬರ ಹೆಸರನ್ನು ಕಾಂಗ್ರೇಸ್ ಹೈಕಮಾಂಡ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಪ್ರಿಯಾಂಕಾ ಸ್ಪರ್ಧಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ನನ್ನ ಜೊತೆ ಚರ್ಚಿಸಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳು ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಾಗಿದ್ದು, ರಂಗ ತಾಲೀಮು ಈಗಾಗಲೇ ನಡೆದಿದೆ.
Author: Karnataka Files
Post Views: 5





