ನಿನ್ನೆ ತಡರಾತ್ರಿ ಬೆಂಗಳೂರಿಣ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದೂರು ಧಾಖಲಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಯಡಿಯೂರಪ್ಪನವರ ಮೇಲೆ ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿವೆ. ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2, 2024 ರಂದು ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎನ್ನಲಾಗಿದೆ.
Author: Karnataka Files
Post Views: 2





