ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರ ಸಂಪೂರ್ಣ ಸಜ್ಜಾಗಿದೆ. ಇಂದು ಕಾಂಗ್ರೇಸ್ಸಿನ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಲೆಕ್ಕಾಚಾರಗಳು ಆರಂಭಗೊಂಡಿವೆ.
ಸತತವಾಗಿ ನಾಲ್ಕು ಸಲ ಸಂಸದರಾಗಿ ಆಯ್ಕೆಯಾಗಿರುವ ಪ್ರಲ್ಲಾದ ಜೋಶಿ 5 ನೇ ಬಾರಿಗೆ ಸ್ಪರ್ಧಿಸುತ್ತಿದ್ದರೆ, ಅವರ ಎದುರಾಳಿಯಾಗಿ ಕಾಂಗ್ರೇಸ್ಸಿನಿಂದ ವಿನೋದ ಅಸೂಟಿ ಕಣದಲ್ಲಿದ್ದಾರೆ.
8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿರುವ ಧಾರವಾಡ ಲೋಕಸಭಾ ಕ್ಷೇತ್ರ ರಂಗೇರಿದೆ. ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಹಾಗೂ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಸಮಬಲದ ಪೈಪೋಟಿ ನಡೆಯುವ ಸಾಧ್ಯತೆ ಗೋಚರಿಸುತ್ತಿದೆ.
ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಕೇಂದ್ರ ಸಚಿವರಾಗಿ ಕೆಲಸ ಮಾಡಿರುವ ಪ್ರಲ್ಲಾದ ಜೋಶಿ ಹಾಗೂ ಕಾರ್ಮಿಕ ಸಚಿವರಾಗಿರುವ ಸಂತೋಷ ಲಾಡ ಇವರಿಗೆ ಈ ಕ್ಷೇತ್ರ ಪ್ರತಿಷ್ಟೆಯ ಕಣವಾಗಿ ಮಾರ್ಪಟ್ಟಿದೆ.
Author: Karnataka Files
Post Views: 5





