ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಇಂದು ತವರು ಕ್ಷೇತ್ರ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.
ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿರುವ ವಿನೋದ ಅಸೂಟಿಗೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿಗರು ಪಕ್ಷಾತೀತವಾಗಿ ಬೆನ್ನು ತಟ್ಟುತ್ತಿದ್ದಾರೆ. ತಾಲೂಕಿನ ಅಭಿಮಾನಕ್ಕೆ, ವಿನೋದ ಅಸೂಟಿಗೆ ಬೆಂಬಲ ಸೂಚಿಸುತ್ತಿರುವದು ಕಂಡು ಬರುತ್ತಿದೆ.
ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಪ್ರಚಾರದ ನೇತೃತ್ವವಹಿಸಿದ್ದಾರೆ. ವಿನೋದ ಹೋದಲ್ಲೆಲ್ಲ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ನವಲಗುಂದದಲ್ಲಿ ಹೊಸ ಟ್ರೆಂಡ್ ಶುರುವಾಗಿದೆ.
ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ಬಹುತೇಕ ಯುವಕರು ವಿನೋದ ಅಸೂಟಿ ಭಾವಚಿತ್ರದ ಹಚ್ಚೆ ( ಟ್ಯಾಟೋ ) ಹಾಕಿಸಿಕೊಳ್ಳುತ್ತಿದ್ದಾರೆ. ಹಚ್ಚೆ ಹಾಕಿಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ಯುವ ನಾಯಕನಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ ತಾಲೂಕಿನ ಹಳ್ಳಿಗಳಲ್ಲಿ ಪ್ರಚಾರ ನಡೆಸಿರುವ ಅಸೂಟಿಯವರಿಗೆ ಪಕ್ಷಾತೀತವಾಗಿ ಬೆಂಬಲ ಸಿಗುತ್ತಿರುವದು ಕಂಡು ಬಂದಿದೆ.





