ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಪ್ರತಿಷ್ಟಿತ ಕ್ಷೇತ್ರವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಧುವೀರ ಸೇರಿದಂತೆ ಶಾಸಕರು ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ಎಚ್ ಡಿ ಕೆ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
Author: Karnataka Files
Post Views: 8





