ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಸಮರಾಭ್ಯಾಸ ಆರಂಭಿಸಿದೆ. ಇಂದು ಬೆಂಗಳೂರಿನಲ್ಲಿ ಅಭ್ಯರ್ಥಿ ವಿನೋದ ಅಸೂಟಿಗೆ ಬಿ ಫಾರ್ಮ್ ಕೊಡುವ ವೇಳೆ ಮುಖಂಡರು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಜಿಲ್ಲೆಯ ಜನಪ್ರತಿನಿದಿಗಳ ಸಮ್ಮುಖದಲ್ಲಿ ಬಿ ಫಾರ್ಮ್ ವಿತರಿಸಿದ್ದು, ಗೆಲ್ಲಿಸಿ ತರುವಂತೆ ಸೂಚನೆ ನೀಡಿದ್ದಾರೆ.
ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಅವರ ಮೇಲೆ ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿ ಹೊರಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಪ್ರಸಾದ ಅಬ್ಬಯ್ಯ ಎದುರು ವಿನೋದ ಬಿ ಫಾರ್ಮ್ ಸ್ವೀಕರಿಸಿದರು.
Author: Karnataka Files
Post Views: 2





