Download Our App

Follow us

Home » ಅಪರಾಧ » ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಬಿಜೆಪಿ ಮುಖಂಡ ವಶಕ್ಕೆ. ಬಿಜೆಪಿ ನಾಯಕರು ಉತ್ತರ ಕೊಡಲಿ / ರಜತ್

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಬಿಜೆಪಿ ಮುಖಂಡ ವಶಕ್ಕೆ. ಬಿಜೆಪಿ ನಾಯಕರು ಉತ್ತರ ಕೊಡಲಿ / ರಜತ್

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ಇಂದು ವಶಕ್ಕೆ ಪಡೆದಿದ್ದಾರೆ.

ಸ್ಫೋಟಕ್ಕೆ ಕಾಂಗ್ರೇಸ್ ಸರ್ಕಾರವೇ ಕಾರಣ ಅನ್ನೋವಂತೆ ಮಾತನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ ಎಂದು ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಪ್ರಶ್ನಿಸಿದ್ದಾರೆ. 

ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ ಎಂದು ರಜತ್ ಪ್ರಶ್ನಿಸಿದ್ದಾರೆ. 

ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹಾಕಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದು ರಜತ್ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!