Download Our App

Follow us

Home » ಆರೋಗ್ಯ » ಡೆಂಗ್ಯೂ ಜೋರಾಗುತ್ತಿದೆ ಹುಷಾರು. 4800 ಜನರಲ್ಲಿ ಕಾಣಿಸಿಕೊಂಡ ಡೆಂಗ್ಯೂ

ಡೆಂಗ್ಯೂ ಜೋರಾಗುತ್ತಿದೆ ಹುಷಾರು. 4800 ಜನರಲ್ಲಿ ಕಾಣಿಸಿಕೊಂಡ ಡೆಂಗ್ಯೂ

ಕೋರೋನಾ ಕರಿನೆರಳಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ರು ಅನ್ನುವಷ್ಟರಲ್ಲಿ, ಇದೀಗ ಡೆಂಗ್ಯೂ ಆತಂಕ ಹುಟ್ಟಿಸಿದೆ. 

ಬೆಂಗಳೂರು ನಗರವೊಂದರಲ್ಲಿಯೇ 2,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 4,800 ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆ ಡೆಂಗ್ಯೂ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು ಸಹ, ಡೆಂಗ್ಯೂ ನಿಯಂತ್ರಣಕ್ಕೆ ಬರುತ್ತಿಲ್ಲ. 

ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಡೆಂಗ್ಯೂ ಕಾಣಿಸಿಕೊಂಡಿದೆ. ಇದು ಕೇವಲ ಸರ್ಕಾರಿ ಆಸ್ಪತ್ರೆಗಳ ಅಂಕಿ ಅಂಶವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಇದರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ. ಕಲುಷಿತ ವಾತಾವರಣದಿಂದ ದೂರ ಇರುವಂತೆ ಮತ್ತು ಸ್ವಚ್ಛತೆ ಕಡೆಗೆ ಗಮನ ಹರಿಸಬೇಕಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!