ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ, ರಾಜ್ಯಪಾಲರಿಗೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ರಾಜ್ಯಪಾಲರು, ನಿಮ್ಮ ಮೇಲೆ ಏಕೆ ಕಾನೂನು ಕ್ರಮ ತೆಗೆದುಕೊಳ್ಳಬಾರದು ಎಂದು ಹೇಳಿ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದ್ದರು.
ರಾಜ್ಯಪಾಲರು ನೀಡಿದ್ದ ನೋಟಿಸಗೆ ಸುಧಿರ್ಘ ಉತ್ತರ ಕೊಟ್ಟಿದ್ದ ಸಿದ್ದರಾಮಯ್ಯನವರು, ಯಾವದೇ ಕಾನೂನು ಬಾಹಿರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ರಾಜ್ಯಪಾಲರ ನಡೆ, ಬಿಜೆಪಿ ಹಾಗೂ ಕಾಂಗ್ರೇಸ್ ನಾಯಕರ ಸಮರಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯನವರು ಸೇರಿದಂತೆ ಸಂಪುಟದ ಸದಸ್ಯರು, ಬಿಜೆಪಿ ರಾಜಭವನವನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.
ಇದೀಗ ರಾಜ್ಯಪಾಲರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ್ದು, ಸಿದ್ದರಾಮಯ್ಯನವರು ಕಾನೂನು ಸಮರಕ್ಕೆ ಮುಂದಾಗಲಿದ್ದಾರೆ.
Author: Karnataka Files
Post Views: 7





