ಕೊಲೆ ಪ್ರಕರಣದಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್, ಹಾಗೂ ಪವಿತ್ರಾಗೌಡಗೆ ಕಡೆಗೂ ಹೈಕೋರ್ಟ ಜಾಮೀನು ಮಂಜೂರು ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ವಾದ-ಪ್ರತಿವಾದ ಆಲಿಸಿದ ಡಿಸೆಂಬರ್ ಬಳಿಕ 9ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಿದ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಜೂನ್ 22 ರಿಂದ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ದರ್ಶನ್ ಅಕ್ಟೋಬರ್ 30 ರಂದು ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಂದಿನಿಂದ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Author: Karnataka Files
Post Views: 2





