Download Our App

Follow us

Home » ಕರ್ನಾಟಕ » ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ. ವಿಜಯಲಕ್ಷ್ಮಿ ಶಿಬರೂರು ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ. ವಿಜಯಲಕ್ಷ್ಮಿ ಶಿಬರೂರು ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. 

ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ.

ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿದೆ. ಪತ್ರಕರ್ತರಾಗಿರುವ  ವಿಜಯಲಕ್ಷ್ಮಿ ಶಿಬರೂರು,  ಬಿ.ಎಂ.ಟಿ ರಾಜೀವ್, ವಿನೋದಕುಮಾರ್ ಬಿ. ನಾಯ್ಕ ಹಾಗೂ ಮಾಲತೇಶ ಅಂಗೂರ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!