Download Our App

Follow us

Home » ಕಾನೂನು » ಹಿರಿಯ ಸಂಶೋದಕ ಡಾ. ಎಮ್ ಎಮ್ ಕಲಬುರ್ಗಿ ಕೊಲೆ ಪ್ರಕರಣ. ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು

ಹಿರಿಯ ಸಂಶೋದಕ ಡಾ. ಎಮ್ ಎಮ್ ಕಲಬುರ್ಗಿ ಕೊಲೆ ಪ್ರಕರಣ. ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು

ದೇಶದಲ್ಲಿ ಸುದ್ದಿ ಮಾಡಿದ್ದ, ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ ಅವರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಧಾರವಾಡ ಜಿಲ್ಲಾ ನ್ಯಾಯಾಲಯವು ಈಚೆಗೆ ಜಾಮೀನು ಮಂಜೂರು ಮಾಡಿದೆ. 

ಈಗಾಗಲೇ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

ಧಾರವಾಡದ ಕಲ್ಯಾಣ ನಗರದಲ್ಲಿ 2015 ರ ಆಗಸ್ಟ್ 30 ರಂದು ಬೆಳಿಗ್ಗೆ ಎಂ ಎಮ್ ಕಲಬುರ್ಗಿಯವರನ್ನು ಹತ್ಯೆ ಮಾಡಲಾಗಿತ್ತು. ಶರದ ಕಾಲಸ್ಕರ ಎಂಬಾತನ ಬೈಕಿನಲ್ಲಿ ಬಂದಿದ್ದ ಗಣೇಶ ಮಿಸ್ಕಿನ್ ಎಂಬಾತ ಗುಂಡು ಹಾರಿಸಿ ಪರಾರಿಯಾಗಿದ್ದ ಎಂದು ಆರೋಪಿಸಲಾಗಿತ್ತು. 

ಧಾರವಾಡ ಜಿಲ್ಲಾ ನ್ಯಾಯಾಲಯದಿಂದ ಅಮುಲ್ ಕಾಳೆ, ಗಣೇಶ ಮಿಸ್ಕಿನ್ ಮತ್ತು ಶರದ ಕಾಲಸ್ಕರ ಎಂಬ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. 

ಈಗಾಗಲೇ ಹೈಕೋರ್ಟ್ ನಿಂದ ಆರೋಪಿಗಳಾದ ಪ್ರವೀಣ, ವಾಸುದೇವ ಸೂರ್ಯವಂಶಿ ಹಾಗೂ ಅಮಿತ್ ಬದ್ದಿ ಜಾಮೀನು ಪಡೆದುಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!