Download Our App

Follow us

Home » ರಾಜಕೀಯ » ಬಿಜೆಪಿ ಲೀಡರ್ ಲೆಸ್ ಪಾರ್ಟಿ. ದಯನೀಯ ಸ್ಥಿತಿಗೆ ತಲುಪಿದೆ – ಜಗದೀಶ ಶೆಟ್ಟರ

ಬಿಜೆಪಿ ಲೀಡರ್ ಲೆಸ್ ಪಾರ್ಟಿ. ದಯನೀಯ ಸ್ಥಿತಿಗೆ ತಲುಪಿದೆ – ಜಗದೀಶ ಶೆಟ್ಟರ

ರಾಜ್ಯದಲ್ಲಿ ಬಿಜೆಪಿ ದಯನೀಯ ಸ್ಥಿತಿಗೆ ತಲುಪಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಹೇಳಿದ್ದಾರೆ. ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ ಅವರು ಮೂರು ತಿಂಗಳಾಗುತ್ತಾ ಬಂದರು ಸಹ ವಿರೋದ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಿನದಿಂದ ದಿನಕ್ಕೆ ತನ್ನ ಆಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಜೊತೆ ಮೂರು ಘಂಟೆಗಳ ಕಾಲ ಚರ್ಚೆ ಮಾಡಿದ್ದೇನೆ ಎಂದು ಜಗದೀಶ ಶೆಟ್ಟರ ತಿಳಿಸಿದರು. ಲೋಕಸಭೆಯಲ್ಲಿ 15 ರಿಂದ 20 ಸ್ಥಾನಗಳನ್ನು ಗೆಲ್ಲೋದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶೆಟ್ಟರ ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬೆಳಗಾವಿಯಲ್ಲಿ ಇಂಜಿನೀಯರಿಂಗ ಓದಿದ ವಿದ್ಯಾರ್ಥಿ, ಈಗ ನೇಪಾಳದ ಹೊಸ ಪ್ರಧಾನಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ 35 ವರ್ಷದ ಬಾಲೇಂದ್ರ ಶಾ ಇದೀಗ ನೇಪಾಳದ ಹೊಸ ಮತ್ತು ಕಿರಿಯ ಪ್ರಧಾನಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ನೇಪಾಳದಲ್ಲಿ ಆರಾಜಕತೆ

Live Cricket

error: Content is protected !!