Download Our App

Follow us

Home » ತಂತ್ರಜ್ಞಾನ » ಬೆಂಗಳೂರು 2ನೇ ವಿಮಾನ ನಿಲ್ದಾಣ, ಎಪ್ರಿಲ್ 8 ರಂದು ಕೇಂದ್ರದಿಂದ ಸ್ಥಳ ಪರಿಶೀಲನೆ / ಎಮ್ ಬಿ ಪಾಟೀಲ

ಬೆಂಗಳೂರು 2ನೇ ವಿಮಾನ ನಿಲ್ದಾಣ, ಎಪ್ರಿಲ್ 8 ರಂದು ಕೇಂದ್ರದಿಂದ ಸ್ಥಳ ಪರಿಶೀಲನೆ / ಎಮ್ ಬಿ ಪಾಟೀಲ

ಬೆಂಗಳೂರು 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮೂರು ಕಡೆಗೆ ಜಾಗೆ ಗುರುತಿಸಿದ್ದು, ಎಪ್ರಿಲ್ 8 ರಂದು ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ತಿಳಿಸಿದ್ದಾರೆ. 

ಎಕ್ಸ್ ಖಾತೆಯಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ಏ.7 ರಿಂದ 9ರ ನಡುವೆ ಕೇಂದ್ರದ ತಂಡ ಆಗಮಿಸಲಿದೆ ಎಂದು ಹೇಳಿದ್ದಾರೆ. 

ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಕನಕಪುರ ರಸ್ತೆಯಲ್ಲಿ 2 ಹಾಗೂ ನೆಲಮಂಗಲ–ಕುಣಿಗಲ್ ರಸ್ತೆಯಲ್ಲಿ 1 ಜಾಗ ಸೇರಿದಂತೆ ಒಟ್ಟು 3 ಸ್ಥಳಗಳನ್ನು ಆಖೈರು ಮಾಡಲಾಗಿದೆ. 

ಈ ಸ್ಥಳಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ.

ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ. ಅವರ ವರದಿಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಚಿವ ಎಮ್ ಬಿ ಪಾಟೀಲ ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!